ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಮೈಲಾರಪ್ಪ ಬೂದಿಹಾಳ ಆಯ್ಕೆ
ಗಂಗಾವತಿ: 5
ತಾಲೂಕಿನ ಹಣವಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ, ದಲಿತ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಹಾಗೂ ಸಾಹಿತಿ ಮೈಲಾರಪ್ಪ ಬೂದಿಹಾಳ ಅವರು ರಾಜ್ಯ ಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿಯಾಗಿದೆ.
ಶಿಕ್ಷಣ ಕ್ಷೇತ್ರದ ಸೇವೆಯ ಜತೆಗೆ ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರದಲ್ಲೂ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಮೈಲಾರಪ್ಪ ಬೂದಿಹಾಳ ಅವರು ಉತ್ತಮ ಒಡನಾಡಿಯಾಗಿ ಗುರುತಿಸಿಕೊಂಡಿದ್ದಾರೆ.
ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ವಕೀಲ ಹುಸೇನಪ್ಪ ಹಂಚಿನಾಳ ಅವರು ಹರ್ಷ ವ್ಯಕ್ತಪಡಿಸಿ, ಮೈಲಾರಪ್ಪ ಬೂದಿಹಾಳ ಅವರಿಗೆ ಹೃದಯಪೂರ್ವಕ ಅಭಿನಂದನೆ ಹಾಗೂ ಶುಭಾಶಯಗಳನ್ನು ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಮಟ್ಟದ ಪ್ರಶಸ್ತಿಗಳು ಅವರ ಮುಡಿಗೇರಲಿ. ಬುದ್ಧ, ಬಸವ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಮಾನವೀಯತೆಯ ಚಿಂತನೆಗಳನ್ನು ಜನರಿಗೆ ಇನ್ನಷ್ಟು ಪರಿಣಾಮಕಾರಿಯಾಗಿ ತಲುಪಿಸುವ ಶಕ್ತಿ ಅವರಿಗೆ ದೊರೆಯಲಿ ಎಂದು ಹಾರೈಸಿದ್ದಾರೆ.
