October 7, 2026
IMG-20260908-WA0096

*ಕನಕಗಿರಿ :* ಸೆ 8. ಶ್ರಾವಣ ಮಾಸದ ಅಂಗವಾಗಿ ಪಟ್ಟಣದ ಶ್ರೀ ಮಹಿಷಾಸುರ ಮರ್ದಿನಿ ದೇವಾಲಯದಲ್ಲಿ ಮಂಗಳವಾರ ವಿಶೇಷ ಪೂಜಾ ಕಾರ್ಯಕ್ರಮವನ್ನು ಭಕ್ತಿಭಾವದಿಂದ ನೆರವೇರಿಸಲಾಯಿತು. ಬೆಳಗ್ಗೆಯಿಂದಲೇ ದೇವಸ್ಥಾನದಲ್ಲಿ ದೇವಿಗೆ ಪಂಚಾಮೃತ ಅಭಿಷೇಕ, ಕುಂಕುಮಾರ್ಚನೆ, ಪುಷ್ಪಾರ್ಪಣೆ, ವಿವಿಧ ಧಾರ್ಮಿಕ ವಿಧಿವಿಧಾನಗಳು, ವಿಶೇಷ ಪೂಜೆ ಹಾಗೂ ಅಲಂಕಾರ ಕಾರ್ಯಕ್ರಮಗಳು ಜರುಗಿದವು.
ವಿಶೇಷ ಪೂಜೆಯಲ್ಲಿ ಸ್ಥಳೀಯ ಭಕ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಪಾಲ್ಗೊಂಡು ದೇವಿಯ ಆಶೀರ್ವಾದ ಪಡೆದರು.
ಪೂಜಾ ಕಾರ್ಯಕ್ರಮದ ಬಳಿಕ ಭಕ್ತಾದಿಗಳಿಗೆ ಕಮಿಟಿ ಅವರಿಂದ ಅನ್ನ ಪ್ರಸಾದ ವಿತರಿಸಲಾಯಿತು. ಭಕ್ತರು ಅನ್ನ ಪ್ರಸಾದ ಸ್ವೀಕರಿಸಿ ದೇವಿಯ ಕೃಪೆಗೆ ಪಾತ್ರರಾದರು. ಶ್ರಾವಣ ಮಾಸದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆಯುತ್ತಿರುವುದು ಭಕ್ತರಲ್ಲಿ ಭಕ್ತಿ ಭಾವ ಸಂತಸ ಮೂಡಿಸಿದೆ.

Leave a Reply

Your email address will not be published. Required fields are marked *