*
*ಕನಕಗಿರಿ,ಸೆ.9-*
ಪಟ್ಟಣದ ತಾಲೂಕು ಪಂಚಾಯತ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಹಾಗೂ ಶ್ರೀ ವಿಶ್ವಕರ್ಮ ಜಯಂತಿ ಆಚರಿಸುವ ಪ್ರಯುಕ್ತ ಮಂಗಳವಾರ ಪೂರ್ವಭಾವಿ ಸಭೆ ನಡೆಯಿತು.
ತಹಶೀಲ್ದಾರ್ ಚಂದ್ರಶೇಖರ ಗಾಳಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉತ್ಸವ ಮತ್ತು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವ ಕುರಿತು ಚರ್ಚಿಸಲಾಯಿತು.
ಸೆಪ್ಟೆಂಬರ್ 17 ರಂದು ಕಲ್ಯಾಣ ಕರ್ನಾಟಕ ಉತ್ಸವ ಮತ್ತು ವಿಶ್ವಕರ್ಮ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು. ಎಲ್ಲಾ ಇಲಾಖೆಯ ಅಧಿಕಾರಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಹಶೀಲ್ದಾರ್ ಸೂಚಿಸಿದರು.
ಪ.ಪಂ ಮುಖ್ಯಾಧಿಕಾರಿ ಕೆ. ರಾಜಶೇಖರ, ಎಪಿಎಂಸಿ ಕಾರ್ಯದರ್ಶಿ ಸಾವಿತ್ರಿ ಪಾಟೀಲ್, ವಿವಿಧ ಇಲಾಖೆ ಅಧಿಕಾರಿಗಳು, ಸಮಾಜ ಮುಖಂಡರು ಉಪಸ್ಥಿತರಿದ್ದರು.
