August 22, 2026

ಸೊಳ್ಳೆಗಳಿಂದ ಹರಡುವ ರೋಗಗಳ ಬಗ್ಗೆ ಜಾಗೃತಿ ಮೂಡಿಸಿ,,

0
WhatsApp Image 2026-08-20 at 15.28.14

ಗಂಗಾವತಿ : ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ–2ರಲ್ಲಿ ವಿಶ್ವ ಸೊಳ್ಳೆ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಆಶಾಬೇಗಂ ಮಾತನಾಡಿ, ಸೊಳ್ಳೆಗಳಿಂದ ಡೆಂಗ್ಯೂ, ಮಲೇರಿಯಾ, ಚಿಕೂನ್‌ಗುನ್ಯ ಸೇರಿದಂತೆ ಹಲವು ರೋಗಗಳು ಹರಡುವ ಸಾಧ್ಯತೆ ಇದೆ. ಆದ್ದರಿಂದ ಸಾರ್ವಜನಿಕರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಮನೆ ಹಾಗೂ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಿರ್ಮೂಲನೆ ಮಾಡುವ ಮೂಲಕ ಸೊಳ್ಳೆಗಳಿಂದ ಹರಡುವ ರೋಗಗಳನ್ನು ತಡೆಗಟ್ಟಬಹುದು ಎಂದು ಹೇಳಿದರು.

ಸಾರ್ವಜನಿಕರು ಜ್ವರ, ತಲೆನೋವು, ಮೈಕೈ ನೋವು ಸೇರಿದಂತೆ ಯಾವುದೇ ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ನಿರ್ಲಕ್ಷ್ಯ ಮಾಡದೆ ಕೂಡಲೇ ಸಮೀಪದ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ಅವರು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಹನುಮೇಶ, ರಮೇಶ್, ವಿಜಯಕುಮಾರ್, ಕಾವ್ಯ ಗಂಗಮ್ಮ, ಜಯಸಿಂಹ, ಆಶಾ ಕಾರ್ಯಕರ್ತೆಯರು ಸಾರ್ವಜನಿಕರು ಉಪಸ್ಥಿತರಿದ್ದರು.

ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *