ಗಂಗಾವತಿ: ಸೆ 12
ಕಾಂಗ್ರೆಸ್ ಪಕ್ಷದ ನೂತನ ಜಿಲ್ಲಾ ಅಧ್ಯಕ್ಷರಾಗಿ ನೇಮಕಗೊಂಡ ಎಂ. ಮಲ್ಲಿಕಾರ್ಜುನ ನಾಗಪ್ಪ ಅವರನ್ನು ಕಾಂಗ್ರೆಸ್ ಮುಖಂಡ ಗ್ಯಾರಂಟಿ ಸಮಿತಿ ಜಿಲ್ಲಾ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಅವರು ಸನ್ಮಾನಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಹುಲಗಪ್ಪ, ಮಾಜಿ ಟಿಪಿ ಸದಸ್ಯರು, ಕೆಎಂಎಫ್ ಕಾಂತರಾವ್, ಸತ್ಯನಾರಾಯಣ ನಾಗೇಶ, ಧನಂಜಯ್ಯ, ಅಮರೇಶ ಗೋನಾಳ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಸೇರಿದಂತೆ ವಿವಿಧ ಮುಖಂಡರು ಉಪಸ್ಥಿತರಿದ್ದು, ನೂತನ ಜಿಲ್ಲಾಧ್ಯಕ್ಷರಿಗೆ ಶುಭಾಶಯ ಕೋರಿದರು.
ಕಳೆದ ಸಾರ್ವತ್ರಿಕ ಚುನಾವಣೆಯಲ್ಲಿ ಮಾಜಿ ಸಚಿವ ಅಮರೇಗೌಡ ಬಯ್ಯಾಪುರ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣೆಯನ್ನು ಎದುರಿಸಿತ್ತು. ಇದೀಗ ಪಕ್ಷಕ್ಕೆ ಹೊಸ ಜಿಲ್ಲಾ ಅಧ್ಯಕ್ಷರ ನೇಮಕವಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಸಂಘಟನೆಗೆ ಮತ್ತಷ್ಟು ಚೈತನ್ಯ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
ಎಂ. ಮಲ್ಲಿಕಾರ್ಜುನ ನಾಗಪ್ಪ ಅವರು ಜಿಲ್ಲೆಯಾದ್ಯಂತ ಪಕ್ಷದ ಸಂಘಟನೆಯನ್ನು ಬಲಪಡಿಸಿ, ಹಿರಿಯರು ಹಾಗೂ ಯುವ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷವನ್ನು ತಳಮಟ್ಟದಿಂದ ಸದೃಢಗೊಳಿಸಬೇಕು. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಭೂತಪೂರ್ವ ಗೆಲುವು ಸಾಧಿಸುವಂತಾಗಲಿ ಎಂದು ಮುಖಂಡರು ಆಶಿಸಿದರು.
ನೂತನ ಜವಾಬ್ದಾರಿ ವಹಿಸಿಕೊಂಡಿರುವ ಮಲ್ಲಿಕಾರ್ಜುನ ನಾಗಪ್ಪ ಅವರಿಗೆ ಮುಖಂಡರು ಅಭಿನಂದನೆ ಸಲ್ಲಿಸಿ, ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿ ಎಂದು ಹಾರೈಸಿದರು.
