October 7, 2026
IMG-20260912-WA0190

*

*ಕನಕಗಿರಿ,ಸೆ.11-*
ತಾಲೂಕಿನ ಹುಲಿಹೈದರ್ ಗ್ರಾಮದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಸೆ.11, ಶನಿವಾರ ತಾಲೂಕ ಆಡಳಿತ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಹೋಬಳಿ ಮಟ್ಟದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಳ ಉಪ ವಿಭಾಗ ಅಧಿಕಾರಿಗಳಾದ ಮೆಹಬೂಬ್ ಜಿಲಾನ್ ಖುರೇಶಿಯವರು ವಹಿಸಿಕೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಚರ್ಚೆ ನಡೆಸಿದರು.
ಗ್ರಾಮದ ವಿವಿಧ ಮೂಲಭೂತ ಸೌಕರ್ಯಗಳು, ರಸ್ತೆ, ಕುಡಿಯುವ ನೀರು, ವಿದ್ಯುತ್, ಸ್ವಚ್ಛತೆ ಸೇರಿದಂತೆ ಸಾರ್ವಜನಿಕರು ಎದುರಿಸುತ್ತಿರುವ ಹಲವು ಸಮಸ್ಯೆಗಳ ಕುರಿತು ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಸಲ್ಲಿಸಿದರು.
ಸಾರ್ವಜನಿಕರಿಂದ ಸ್ವೀಕರಿಸಲಾದ ಮನವಿಗಳನ್ನು ಪರಿಶೀಲಿಸಿ, ಸಮಸ್ಯೆಗಳಿಗೆ ಆದ್ಯತೆಯ ಮೇರೆಗೆ ಪರಿಹಾರ ಒದಗಿಸುವಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಲಾಯಿತು. ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಕ್ರಮ ಕೈಗೊಳ್ಳುವ ಭರವಸೆಯನ್ನೂ ನೀಡಲಾಯಿತು.
ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ಒಟ್ಟು 4 ಕೌಂಟರ್ ತೆರೆಯಲಾಗಿದ್ದು, ಬೆಳೆಗ್ಗೆಯಿಂದ ಸಂಜೆವರೆಗೆ ನಡೆದ ಕಾರ್ಯಕ್ರಮದಲ್ಲಿ
ಕಂದಾಯ ಇಲಾಖೆ, ಶಿಕ್ಷಣ ಇಲಾಖೆ, ಸಿಡಿಪಿಒ‌ ಕಚೇರಿ ಸೇರಿದಂತೆ ಬೇರೆ ಬೇರೆ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 60 ಅರ್ಜಿ ಸ್ವೀಕೃತವಾದವು. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಬೇರೆ ಬೇರೆ ವಿಷಯಗಳ ಮೇಲೆ ಲಿಖಿತವಾಗಿ ಅರ್ಜಿ ಸಲ್ಲಿಸಿ ಪರಿಹಾರ ಕಂಡುಕೊಂಡರು.
ತಹಸೀಲ್ದಾರ್ ಚಂದ್ರಶೇಖರ ಗಾಳಿ ಮಾತನಾಡಿ, ಜನರ ಸಮಸ್ಯೆ ಆಲಿಸುವುದೇ ಈ ಆಂದೋಲನದ ಪ್ರಮುಖ ಗುರಿಯಾಗಿದ್ದು, ಒಂದೇ ಸೂರಿನಡಿ ಎಲ್ಲ ಇಲಾಖೆಗಳ ಸೇವೆ ಒದಗಿಸುವುದು ಈ ಪ್ರಜಾಸೇವಾ ಆಂದೋಲನದ ಮುಖ್ಯ ಉದ್ದೇಶವಾಗಿದೆ. ರೈತರ ಪಹಣಿ ತಿದ್ದುಪಡಿ, ಪಿಂಚಣಿ ಸಮಸ್ಯೆ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್ ತಿದ್ದುಪಡಿ, ಪಡಿತರ ಚೀಟಿ, ಉದ್ಯೋಗ ಖಾತ್ರಿ, ಸ್ವಸಹಾಯ ಸಂಘಗಳ ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ರಾಜಶೇಖರ್, ಪಿ ಐ ವೀರಣ್ಣ ಹಳ್ಳಿ, ಎಪಿಎಂಸಿ ಕಾರ್ಯದರ್ಶಿ ಸಾವಿತ್ರಿ ಪಾಟೀಲ್, ಸಿಡಿಪಿಒ ವಿಜಯಲಕ್ಷ್ಮಿ ಹಿರೇಮಠ, ಟಿಎಚ್‌ಒ ಶರಣಪ್ಪ, ಖಜಾನೆ ಸಹಾಯಕ ಅಧಿಕಾರಿ ದುರ್ಗಾಸಿಂಗ್, ಅಬಕಾರಿ ನಿರೀಕ್ಷಕ ಶಶಿಧರ, ತಾಪಂ ಎಡಿ ವೀರಣ್ಣ ನಕ್ರಳ್ಳಿ, ಪಿಡಿಒಗಳಾದ ಲಕ್ಷ್ಮಣ, ಹನುಮಂತಪ್ಪ, ಚಂದ್ರಸ್ವಾಮಿ ಸೇರಿದಂತೆ ತಾಲೂಕ ಮಟ್ಟದ ಅಧಿಕಾರಿಗಳು, ಸ್ಥಳೀಯ ಮುಖಂಡರು, ವಿವಿಧ ಇಲಾಖೆಗಳ ಸಿಬ್ಬಂದಿ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *