ಸದ್ಭಾವನಾ ದಿನ: ಜಿಲ್ಲಾಡಳಿತದ ಭವನದಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ
ಕೊಪ್ಪಳ : ಸದ್ಭಾವನಾ ದಿನದ ಅಂಗವಾಗಿ ಜಿಲ್ಲಾಡಳಿತ ಭವನದದಲ್ಲಿ ಗುರುವಾರ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ನಡೆಯಿತು.
ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಪ್ರತಿಜ್ಞೆ ಬೋಧಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳು ಹಾಗೂ ಜಿಲ್ಲಾಧಿಕಾರಿ ಕಛೇರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದು, “ಜಾತಿ, ಧರ್ಮ, ಪ್ರದೇಶ, ಮತ ಅಥವಾ ಭಾಷೆಯ ಬೇಧ ಭಾವವಿಲ್ಲದೇ ಭಾರತದ ಎಲ್ಲಾ ಜನತೆಯ ಭಾವೈಕ್ಯ ಮತ್ತು ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುತ್ತೇನೆಂದು ನಾನು ಪ್ರತಿಜ್ಞೆ ಮಾಡುತ್ತೇನೆ. ಅಲ್ಲದೇ, ವೈಯಕ್ತಿಕವಾಗಿಯಾಗಲೀ ಅಥವಾ ಸಾಮೂಹಿಕವಾಗಿಯಾಗಲೀ ನಮ್ಮಲ್ಲಿರುವ ಎಲ್ಲಾ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುತ್ತೇನೆಂದು ಸಹ ಪ್ರತಿಜ್ಞೆ ಮಾಡುತ್ತೇನೆ” ಎಂಬ ಪ್ರತಿಜ್ಞೆಯನ್ನು ಸ್ವೀಕರಿಸಿದರು.
