October 7, 2026
IMG-20260922-WA0031

ಕನಕಗಿರಿ,ಸೆ.22-
ತಾಲೂಕಿನ ಹಿರೇಖೇಡ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಲ್ಲಿಗೆವಾಡ ಗ್ರಾಮದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಕರ್ನಾಟಕ ಜನಸೇನಾ ವೇದಿಕೆ (ರಿ) ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.
*ಆರೋಪಗಳೇನು?*
​ಮಲ್ಲಿಗೆವಾಡ ಗ್ರಾಮದಲ್ಲಿ ನರೇಗಾ ಯೋಜನೆಯಡಿ ಕೆಲಸಗಾರರ ಹಾಜರಾತಿಯನ್ನು ವೀಡಿಯೊ ಹಾಗೂ ವೀಡಿಯೊ ಕಾಲ್ ಮೂಲಕ ಪಡೆಯಲಾಗುತ್ತಿದ್ದು, ನಕಲಿ ಜಾಬ್ ಕಾರ್ಡ್‌ಗಳನ್ನು ಸೃಷ್ಟಿಸಿ ಉದ್ಯೋಗ ಖಾತ್ರಿ ಯೋಜನೆಯ ಹಣವನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ.
​ನಕಲಿ ಜಾಬ್ ಕಾರ್ಡ್ ಮಾಡಿಕೊಡುವಲ್ಲಿ ಕಂಪ್ಯೂಟರ್ ಆಪರೇಟರ್ ಶಾಮೀಲಾಗಿದ್ದಾರೆ ಎಂದು ದೂರಿನಲ್ಲಿ ಗಂಭೀರವಾಗಿ ದೂರಲಾಗಿದೆ.
​ಈ ಕುರಿತು ಈಗಾಗಲೇ 2026ರ ಸೆಪ್ಟೆಂಬರ್ 15 ರಂದು ಹಿರೇಖೇಡ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗೆ (PDO) ದೂರು ನೀಡಲಾಗಿದ್ದರೂ, ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವೇದಿಕೆಯು ಆಕ್ರೋಶ ವ್ಯಕ್ತಪಡಿಸಿದೆ.
​ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಹಾಗೂ ನರೇಗಾ ಯೋಜನೆಯ ಹಣವನ್ನು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಿಸಬೇಕೆಂದು ಕರ್ನಾಟಕ ಜನಸೇನಾ ವೇದಿಕೆಯ ಜಿಲ್ಲಾಧ್ಯಕ್ಷರಾದ ಯಮನೂರಪ್ಪ ಅವರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *