October 7, 2026
IMG-20260922-WA0062

ಕನಕಗಿರಿ,ಸೆ.22-
ಪತ್ರಕರ್ತರು ಸಮಾಜದ ಹಾಗು ಹೋಗುಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯುತ ಕೊಂಡಿಯಾಗಿದ್ದು, ಸತ್ಯ, ನಿಷ್ಠೆ ಹಾಗೂ ವಸ್ತುನಿಷ್ಠತೆಯಿಂದ ಕಾರ್ಯನಿರ್ವಹಿಸುವುದರ ಜೊತೆಗೆ, ಸಮಾಜದ ಕಾವಲುಗಾರರಾಗಿ ಕಾರ್ಯನಿರ್ವಹಿಸಬೇಕು ಎಂದು ಮಾಧ್ಯಮ ಅಕಾಡೆಮಿ ಸದಸ್ಯ ಕೆ.ನಿಂಗಜ್ಜ ಅಭಿಪ್ರಾಯ ಪಟ್ಟರು.

ಅವರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೆ.ಪಿ.ಎಸ್. ಕಾಲೇಜು ವಿಭಾಗದ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕನಕಗಿರಿ ತಾಲೂಕು ಘಟಕದ ವತಿಯಿಂದ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಹಾಗೂ ಕೆ.ಯು.ಡಬ್ಲ್ಯೂ.ಜೆ. ಜಿಲ್ಲಾ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರು ಸಮಾಜದ ಹಾಗು ಹೋಗುಗಳನ್ನು ಜನರಿಗೆ ತಲುಪಿಸುವ ಜವಾಬ್ದಾರಿಯುತ ಕೊಂಡಿಯಾಗಿದ್ದು, ಸತ್ಯ, ನಿಷ್ಠೆ ಹಾಗೂ ವಸ್ತುನಿಷ್ಠತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಅಲ್ಲದೇ, ಮಾಧ್ಯಮ ಕ್ಷೇತ್ರವು ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿದ್ದು, ಸಮಾಜದಲ್ಲಿನ ಸಮಸ್ಯೆಗಳು, ಜನರ ನೋವು-ನಲಿವು ಹಾಗೂ ಅಭಿವೃದ್ಧಿಯ ವಿಚಾರಗಳನ್ನು ಬೆಳಕಿಗೆ ತರುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ. ಪತ್ರಕರ್ತರು ಯಾವುದೇ ಒತ್ತಡಕ್ಕೆ ಒಳಗಾಗದೆ ವಾಸ್ತವಾಂಶಗಳನ್ನು ಪರಿಶೀಲಿಸಿ ಸುದ್ದಿಗಳನ್ನು ಪ್ರಕಟಿಸುವ ಮೂಲಕ ಸಮಾಜದ ಹಿತ ಕಾಪಾಡಬೇಕು ಎಂದು ಅವರು ತಿಳಿಸಿದರು. ಸಂವಿಧಾನದ ನಾಲ್ಕನೇ ಅಂಗವಾಗಿರುವ ಪತ್ರಿಕೋದ್ಯಮ ಕೇವಲ ಸೇವಾ ಕ್ಷೇತ್ರವಾಗಿ ಉಳಿದಿಲ್ಲ ಪತ್ರಕರ್ತರು ಮತ್ತು ಪತ್ರಿಕೋದ್ಯಮ ಎರಡು ಬೇರೆ ಬೇರೆಯಾಗಿವೆ ಆದ್ದರಿಂದ ಪತ್ರಕರ್ತರಿಗೆ ಸೇವಾ ಭದ್ರತೆ ಕಾಡುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮಕ್ಕೂ ಮುನ್ನ ನುಡಿದೊರೆ, ಹಿರಿಯ ಪತ್ರಕರ್ತ ಹಾಗೂ ಸಾಹಿತಿ ಡಿ ವಿ ಗುಂಡಪ್ಪ ಅವರ ಭಾವಚಿತ್ರಕ್ಕೆ ಗಣ್ಯರು ಹಾಗೂ ಪತ್ರಕರ್ತರು ಪುಷ್ಪ ನಮನ ಸಲ್ಲಿಸಿದರು. ಬಳಿಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು.

ಜಿಲ್ಲಾ ವರದಿಗಾರ ಶರಣಬಸವ ಹುಲಿಹೈದರ ಮಾತನಾಡಿ, ಪತ್ರಕರ್ತರು, ಧರ್ಮ, ಜಾತಿ, ಪಂಗಡ ಸೇರಿದಂತೆ ಯಾವುದೇ ಭೇದಭಾವಕ್ಕೆ ಒಳಗಾಗದೆ ವಸ್ತುನಿಷ್ಠ ಹಾಗೂ ಪ್ರಾಮಾಣಿಕವಾಗಿ ಸುದ್ದಿಗಳನ್ನು ಪ್ರಕಟಿಸಬೇಕು. ಪತ್ರಿಕೋದ್ಯಮದ ವಿಶ್ವಾಸ ಮತ್ತು ಅರ್ಹತೆಯನ್ನು ಕಾಪಾಡಿಕೊಳ್ಳುವುದು ಪ್ರತಿಯೊಬ್ಬ ಪತ್ರಕರ್ತನ ಜವಾಬ್ದಾರಿಯಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಘದ ತಾಲೂಕು ಅಧ್ಯಕ್ಷ ಸೋಮಶೇಖರಯ್ಯ ಸ್ವಾಮಿ ಮಾತನಾಡಿ, ಪತ್ರಕರ್ತರಿಗೆ ಬಸ್ ಪಾಸ್ ಸೌಲಭ್ಯ ಕಲ್ಪಿಸುವುದಾಗಿ ಸರಕಾರ ಭರವಸೆ ನೀಡಿದ್ದರೂ ಇದುವರೆಗೆ ಅನುಷ್ಠಾನಗೊಳ್ಳದಿರುವುದು ವಿಷಾದನೀಯ. ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಅಮರೇಶ ದೇವರಾಳ ಮಾತನಾಡಿ, ಪತ್ರಕರ್ತರು ಯಾವುದೇ ರೀತಿಯ ವೈಯಕ್ತಿಕ ಒತ್ತಡ ಹಾಗೂ ಹಿತಾಸಕ್ತಿಗಳಿಗೆ ಒಳಗಾಗದೆ ತಮ್ಮ ವೃತ್ತಿಯ ಘನತೆಯನ್ನು ಕಾಪಾಡಬೇಕು. ದೇಶ ಕಾಯುವ ಸೈನಿಕರು ಹಾಗೂ ಅನ್ನ ನೀಡುವ ರೈತರಂತೆ ಪತ್ರಕರ್ತರು ಕೂಡ ಸಮಾಜದ ಬಗ್ಗೆ ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಹಾಗೂ ವಿವಿಧ ಪ್ರಶಸ್ತಿ ಪುರಸ್ಕೃತರಾದ ಮಹೆಬೂಬ ಹುಸೇನ ಬಿ. ಪ್ರವೀಣ ಕೋರಿ ಶೆಟ್ರು, ಮಧೂಸೂದನರಡ್ಡಿ ಮಾದಿನಾಳ, ಮಹಾಂತೇಶ ಅಂಗಡಿ ಇವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮದ ಪ್ರಾಧ್ಯಾಪಕ ವಿಜಯ ಸರೋದೆ, ರೇಖಾ ಚಕ್ರಸಾಲಿ, ಶಿವಪುತ್ರಪ್ಪ ದಳಪೂಜೆ, ಹನುಮೇಶ್ ಗೌಡ, ಶಿವಶರಣ, ಮರ್ಚಡ್ಡೇಯ್ಸ್ ಪತ್ರಿಕೆಯ ಸಂಪಾದಕ ತಾಯಪ್ಪ, ದಶರಥ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *