ಕನಕಗಿರಿ:ರಾಜ್ಯಾದ್ಯಂತ ಪ್ರತಿ ತಿಂಗಳ ಪ್ರತಿ ಶನಿವಾರದಂದು “ಪ್ರಜಾಸೇವೇ ಆಂದೋಲನ” ಸಭೆಯನ್ನು ನಡೆಸಲು ಕರ್ನಾಟಕ ಸರ್ಕಾರದ ಸುತ್ತೋಲೆ ಹಾಗೂ ಕೊಪ್ಪಳದ ಮಾನ್ಯ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.
ಅದರಂತೆ, ನಾಳೆ ಸೆಪ್ಟೆಂಬರ್ 26, 2026ರಂದು ಶನಿವಾರ ಬೆಳಿಗ್ಗೆ 10:00 ಗಂಟೆಗೆ ಕನಕಗಿರಿ ಹೋಬಳಿಯ ಚಿಕ್ಕಮಾದಿನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ “ಪ್ರಜಾಸೇವೇ ಆಂದೋಲನ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ಎಲ್ಲಾ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಬಗ್ಗೆ ಅಹವಾಲುಗಳನ್ನು ಸಲ್ಲಿಸಲು ಈ ದಿನದಂದು ವಿಶೇಷ ಅವಕಾಶ ಕಲ್ಪಿಸಲಾಗಿದೆ. ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಸಭೆಯ ಸದುಪಯೋಗಪಡಿಸಿಕೊಳ್ಳುವಂತೆ ತಹಶೀಲ್ದಾರ ಚಂದ್ರಶೇಖರ ಗಾಳಿ ಕೋರಿದ್ದಾರೆ.
