October 7, 2026
Picsart_26-09-28_10-15-57-203

{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{},"is_sticker":false,"edited_since_last_sticker_save":false,"containsFTESticker":false}

ಕನಕಗಿರಿ,ಸೆ.28-
ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಬಸ್ ಸಾರಿಗೆ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಶಾಲಾ-ಕಾಲೇಜು ಸಮಯಕ್ಕೆ ಸರಿಯಾಗಿ ಬಸ್ಸುಗಳು ಲಭ್ಯವಿಲ್ಲದ ಕಾರಣ, ವಿದ್ಯಾರ್ಥಿಗಳು ಅನಿವಾರ್ಯವಾಗಿ ಜೀವದ ಹಂಗು ತೊರೆದು ತುಂಬಿದ ಬಸ್ಸಿಗೆ ಜೋತು ಬಿದ್ದು ಪ್ರಯಾಣಿಸುವ ದೃಶ್ಯಗಳು ಪ್ರತಿದಿನ ಸಾಮಾನ್ಯವಾಗಿದೆ.
​ಇಂದು ಕನಕಗಿರಿ ಪೊಲೀಸ್ ಠಾಣೆಯ ಮುಂಭಾಗವಿರುವ ವಾಲ್ಮೀಕಿ ಸರ್ಕಲ್ ಮಿನಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾದು ನಿಂತಿದ್ದ ಸುಮಾರು ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ನಿಲ್ಲಲು ಕೂಡ ಜಾಗವಿರಲಿಲ್ಲ. ಇದರಿಂದ ಕುಪಿತಗೊಂಡ ವಿದ್ಯಾರ್ಥಿಗಳು, ಶಾಲಾ ಅವಧಿಗೆ ತಡವಾಗಬಾರದೆಂದು ಬಸ್ಸಿನ ಹಿಂಭಾಗ ಮತ್ತು ಬಾಗಿಲಿಗೆ ಜೋತು ಬಿದ್ದು ಪ್ರಯಾಣ ಆರಂಭಿಸಿದರು.
​ಈ ದೃಶ್ಯವನ್ನು ಕಂಡ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲಾಡಳಿತ ಮತ್ತು ಕೆಎಸ್ಆರ್ಟಿಸಿ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಕಿಡಿಕಾರಿದ್ದಾರೆ. ಬಸ್ಸುಗಳ ಕೊರತೆ ಇರುವ ಬಗ್ಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದ್ದಾರೆ.
​”ಸರ್ಕಾರಕ್ಕೆ ಆಡಳಿತ ಮುಖ್ಯವೋ ಅಥವಾ ಸಾರ್ವಜನಿಕರ ಸುರಕ್ಷತೆ ಮುಖ್ಯವೋ?” ಎಂದು ಪ್ರಶ್ನಿಸಿರುವ ಸ್ಥಳೀಯರು, “ವಿದ್ಯಾರ್ಥಿಗಳಿಗೆ ಶಿಕ್ಷಣ ಮುಖ್ಯವೋ ಅಥವಾ ಪ್ರಾಣ ಮುಖ್ಯವೋ?” ಎಂದು ಆಕ್ರೋಶ ಹೊರಹಾಕಿದ್ದಾರೆ.
​ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು, ಕನಕಗಿರಿ ಭಾಗಕ್ಕೆ ಹೆಚ್ಚಿನ ಬಸ್ಸುಗಳನ್ನು ನಿಯೋಜಿಸಬೇಕು ಮತ್ತು ವಿದ್ಯಾರ್ಥಿಗಳ ಪ್ರಾಣವನ್ನು ರಕ್ಷಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

Leave a Reply

Your email address will not be published. Required fields are marked *