October 7, 2026
IMG-20261004-WA0023

ಗಂಗಾವತಿ:ಅ.೪-
ಕಾಂಗ್ರೆಸ್ ಪಕ್ಷ ತೊರೆಯುತ್ತಾರೆ ಎಂಬ ಚರ್ಚೆ ಹಾಗೂ ವದಂತಿಗಳಿಗೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರು ಆಡಿಯೋ ಮೂಲಕ ಸ್ಪಷ್ಟನೆ ನೀಡಿದ್ದು, ತಾವು ಕಾಂಗ್ರೆಸ್ ಪಕ್ಷದಲ್ಲಿಯೇ ಮುಂದುವರಿಯುವುದಾಗಿ ತಿಳಿಸಿದ್ದಾರೆ.ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಇನ್ನೂ ಎರಡು ವರ್ಷ ಕಾಂಗ್ರೆಸ್ ಪಕ್ಷದ ಸರ್ಕಾರವಿದೆ. ನಾನು ಪಕ್ಷದ ಬಗ್ಗೆ ಯಾವತ್ತೂ ತಪ್ಪಾಗಿ ಮಾತನಾಡಿಲ್ಲ” ಎಂದು ಅವರು ಹೇಳಿದ್ದಾರೆ.ಸ್ಥಳೀಯ ನಾಯಕರು ತಪ್ಪು ಮಾಡಿದಾಗ ಹಾಗೂ ತಮ್ಮ ಬಗ್ಗೆ ಇಲ್ಲಸಲ್ಲದ ಆರೋಪಗಳು ಬಂದಾಗ ಮಾತ್ರ ಅವರ ವಿರುದ್ಧ ಮಾತನಾಡಿದ್ದೇನೆ. ಅದನ್ನು ಪಕ್ಷದ ವಿರುದ್ಧದ ಹೇಳಿಕೆ ಎಂದು ಅರ್ಥೈಸಬಾರದು ಎಂದು ಅನ್ಸಾರಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ವಾಸವಾಗಿದ್ದರೂ ಗಂಗಾವತಿ ಕ್ಷೇತ್ರದ ಜನರ ಕೆಲಸಗಳಿಗೆ ಸ್ಪಂದಿಸುತ್ತಿದ್ದೇನೆ. ಸಚಿವ ಸಂಪುಟದ ಸದಸ್ಯರು ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಿ ಕ್ಷೇತ್ರದ ಜನರ ಕೆಲಸಗಳನ್ನು ಮಾಡಿಸಿಕೊಡುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಪದಗ್ರಹಣಕ್ಕೆ ಗೈರಾಗಿದ್ದಕ್ಕೆ ಸ್ಪಷ್ಟನೆ
ನೂತನ ಕಾಂಗ್ರೆಸ್ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ತಾವು ಗೈರಾಗಿದ್ದ ವಿಚಾರವೂ ರಾಜಕೀಯ ಚರ್ಚೆಗೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಅನ್ಸಾರಿ ಸ್ಪಷ್ಟನೆ ನೀಡಿದ್ದಾರೆ.ಬೇರೆ ಕೆಲಸ ಇದ್ದ ಕಾರಣ ಕಾರ್ಯಕ್ರಮಕ್ಕೆ ಬರಲು ಆಗಲಿಲ್ಲ. ಅದನ್ನು ಬೇರೆ ರೀತಿಯಲ್ಲಿ ಅರ್ಥೈಸಿಕೊಳ್ಳಬಾರದು” ಎಂದು ಹೇಳಿದ್ದಾರೆ.ಕೆಲವು ಪತ್ರಿಕೆಗಳಲ್ಲಿ ಪ್ರಕಟವಾಗುತ್ತಿರುವ ವರದಿಗಳನ್ನು ಉಲ್ಲೇಖಿಸಿದ ಅವರು, ಅವುಗಳಿಗೆ ಕಾರ್ಯಕರ್ತರು ಹಾಗೂ ಕ್ಷೇತ್ರದ ಜನರು ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
‘ಕಾಂಗ್ರೆಸ್‌ನಲ್ಲೇ ಇರುವೆ’
“ನಾನು ಕಾಂಗ್ರೆಸ್ ಪಕ್ಷದಲ್ಲಿಯೇ ಇರುವೆ. ಪಕ್ಷ ಬಿಡುವ ಬಗ್ಗೆ ಬೇರೆ ಯಾವುದೇ ಯೋಚನೆ ಮಾಡಿಲ್ಲ” ಎಂದು ಅನ್ಸಾರಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಈ ಮೂಲಕ ತಾವು ಕಾಂಗ್ರೆಸ್‌ನಿಂದ ದೂರ ಸರಿಯುತ್ತಿದ್ದಾರೆ ಎಂಬ ಚರ್ಚೆಗೆ ಸ್ವತಃ ಅನ್ಸಾರಿ ಅವರು ಸ್ಪಷ್ಟನೆ ನೀಡಿದ್ದು, ಮುಂದಿನ ದಿನಗಳಲ್ಲಿ ಕ್ಷೇತ್ರದಲ್ಲಿ ತಮ್ಮ ರಾಜಕೀಯ ಚಟುವಟಿಕೆಗಳು ಮುಂದುವರಿಯಲಿವೆ ಎಂಬ ಸಂದೇಶವನ್ನು ಕಾರ್ಯಕರ್ತರಿಗೆ ನೀಡಿದ್ದಾರೆ.

Leave a Reply

Your email address will not be published. Required fields are marked *