October 7, 2026
IMG_20261004_181320

9 ಮಂದಿ ಅವಿರೋಧ, 3 ಮಂದಿ ಚುನಾವಣೆಯಲ್ಲಿ ಆಯ್ಕೆ; ಸಮಸ್ಯೆಗಳಿಗೆ ಸ್ಪಂದಿಸುವ ಭರವಸೆ

ಗಂಗಾವತಿ : ಅ 4 ಸಂಗಾಪುರ: ರೈತರ ನೀರು ಬಳಕೆದಾರರ ಸಂಘದ ಆಡಳಿತ ಮಂಡಳಿಗೆ 12 ಮಂದಿ ಪ್ರತಿನಿಧಿಗಳು ಆಯ್ಕೆಯಾಗಿದ್ದಾರೆ. ಈ ಪೈಕಿ 9 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದು, ಮೂರು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಅಭ್ಯರ್ಥಿಗಳು ಜಯಗಳಿಸಿದ್ದಾರೆ.
ನೂತನ ಆಡಳಿತ ಮಂಡಳಿ ಸದಸ್ಯರು ಮಾಜಿ ವಿಧಾನ ಪರಿಷತ್ ಸದಸ್ಯ ಎಚ್.ಆರ್. ಶ್ರೀನಾಥ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಸನ್ಮಾನಿಸಿದರು. ಈ ವೇಳೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದ ಅವರು, ರೈತರ ಹಿತಾಸಕ್ತಿಗಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುವಂತೆ ಸಲಹೆ ನೀಡಿದರು.
ನೀರಿನ ನಿರ್ವಹಣೆ ಸೇರಿದಂತೆ ಸ್ಥಳೀಯ ಕೃಷಿ ಸಮಸ್ಯೆಗಳಿಗೆ ಸಂಘದ ಮೂಲಕ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಬೇಕು. ಸಂಘಟನೆಯನ್ನು ಮತ್ತಷ್ಟು ಸದೃಢಗೊಳಿಸಿ, ರೈತರ ಧ್ವನಿಯಾಗಿ ಕೆಲಸ ಮಾಡುವ ಅಗತ್ಯವಿದೆ ಎಂದು ಹೇಳಿದರು.
ಸಂಗಾಪುರ ಹಾಗೂ ಸುತ್ತಮುತ್ತಲಿನ ಪ್ರದೇಶದ ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ರಾಜ್ಯ ಸರ್ಕಾರದ ಗಮನಕ್ಕೆ ತಂದು, ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವರಿಕೆ ಮಾಡಿಕೊಡುವುದಾಗಿ ಎಚ್.ಆರ್. ಶ್ರೀನಾಥ್ ಭರವಸೆ ನೀಡಿದರು.ಈ ಸಂದರ್ಭದಲ್ಲಿ ಆಯ್ಕೆಯಾದ ಸದಸ್ಯರು ಮತ್ತು ಎಲ್ಲಾ ರೈತರು ಭಾಗವಹಿಸಿದರು.

Leave a Reply

Your email address will not be published. Required fields are marked *